ಶಿವಮೊಗ್ಗ, ಮಾ 08 (DaijiworldNews/HR): ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಾರಿಖ್ ನನ್ನು ತೀರ್ಥಹಳ್ಳಿ ಹಾಗೂ ಶಿವಮೊಗ್ಗಕ್ಕೆ ಸ್ಥಳ ಮಹಜರು ಮಾಡಲಾಗಿದೆ.
ಶಾರಿಕ್ ನನ್ನು ಶಿವಮೊಗ್ಗದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಎದುರು ಕರೆತಂದಿರುವ ಎನ್ ಐಎ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ.
ಇನ್ನು ತೀರ್ಥಹಳ್ಳಿ ಸೊಪ್ಪುಗುಡ್ಡೆ ಮೂಲದ ಶಾರಿಕ್ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ.ಗುಣಮುಖನಾದ ಬಳಿಕ ಪ್ರಕರಣದ ವಿಚಾರಣೆಯನ್ನು ಎನ್ ಐಎ ತೀವ್ರಗೊಳಿಸಿದ್ದಾರೆ.