ಬೆಂಗಳೂರು, ಮಾ 08 (DaijiworldNews/MS): ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಖಂಡಿಸಿ ಮಾರ್ಚ್ 9ರಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ 2 ಗಂಟೆಗಳ ರಾಜ್ಯಾದ್ಯಂತ ಬಂದ್ ಕರೆ ಯನ್ನು ವಾಪಸ್ ಪಡೆದಿರುವುದಾಗಿ ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ) ತಿಳಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, "ಕೆಪಿಸಿಸಿಯಿಂದ ನಾಳೆಗೆ ಕರೆ ನೀಡಿದ್ದ ಕರ್ನಾಟಕ ಬಂದ್ನ್ನು ಹಿಂಪಡೆಯಲಾಗಿದೆ.ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿ - ಪೋಷಕರ ಮನವಿ ಮೇರೆಗೆ ಬಂದ್ ಹಿಂಪಡೆಯಲಾಗಿದೆ.ಮುಂದಿನ ಹೋರಾಟಕ್ಕೆ ಸಂಬಂಧಿಸಿದಂತೆ ಸ್ಕ್ರೀನಿಂಗ್ ಕಮಿಟಿ ಸಭೆ ಬಳಿಕ ಚರ್ಚಿಸಿ ತೀರ್ಮಾನಿಸಲಾಗುವುದು" ಎಂದು ತಿಳಿಸಿದೆ.
ಮುಂದಿನ ಹೋರಾಟಕ್ಕೆ ಸಂಬಂಧಿಸಿದಂತೆ ಸ್ಕ್ರೀನಿಂಗ್ ಕಮಿಟಿ ಸಭೆ ಬಳಿಕ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಕಾಂಗ್ರೆಸ್ ತಿಳಿಸಿದೆ.