ಯಾದಗಿರಿ, ಮಾ 08 (DaijiworldNews/MS): ಕಾಂಗ್ರೆಸ್ ಪ್ರಚಾರ ಮಾಡುತ್ತಿರುವ ಗ್ಯಾರಂಟಿ ಯೋಜನೆಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು " ಕಾಂಗ್ರೆಸ್ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆಗಳಿಗೆ ಯಾರು ಕಿವಿಗೊಡುತ್ತಿಲ್ಲ. ಕಾಂಗ್ರೆಸ್, ಜೆಡಿಎಸ್ನವರು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಅವರು ಹೇಳಿಕೊಳ್ಳುವುದಕ್ಕೆ ನಾನೇನು ಟೀಕೆ ಮಾಡುವುದಿಲ್ಲ. ಅವರು ನಾವೇ ಮುಖ್ಯಮಂತ್ರಿ ಎಂದು ಕನಸನ್ನು ಕಾಣುತ್ತಿದ್ದಾರೆ ಅದು ನನಸಾಗುವುದಿಲ್ಲ. ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಸತಿ ಸಚಿವ ವಿ.ಸೋಮಣ್ಣ ಅವರು ಕಾಂಗ್ರೆಸ್ ಸೇರುತ್ತಾರೆ ಎನ್ನುವುದಕ್ಕೆ ಸತ್ಯ ವಿಚಾರ ಅಲ್ಲ, ಯಾರು ಕೂಡ ಬಿಜೆಪಿಯನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರುಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.