ನವದೆಹಲಿ, ಮಾ 08 (DaijiworldNews/HR): ದೆಹಲಿ ಅಬಕಾರಿ ನೀತಿ ಜಾರಿ ವೇಳೆ ಹಗರಣ ಪ್ರಕರಣದಲ್ಲಿ ಈಗಾಗಲೇ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರನ್ನು ಬಂಧಿಲಾಗಿದ್ದು, ಇದರ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಅವರಿಗೆ ಸಮನ್ಸ್ ಜಾರಿಗೊಳಿಸಿದ್ದಾರೆ.
ಹೈದರಾಬಾದ್ ಮೂಲದ ಉದ್ಯಮಿ, ಕೆ.ಕವಿತಾ ಅವರ ಆಪ್ತ ಅರುಣ್ ರಾಮಚಂದ್ರ ಪಿಳ್ಳೈ ಅವರನ್ನು ಸೋಮವಾರ ಇ.ಡಿ ಅಧಿಕಾರಿಗಳು ಬಂಧಿಸಿದ್ದು, ಇದೀಗ ಕವಿತಾ ಅವರನ್ನೂ ಮಾರ್ಚ್ 9ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ ಸಮನ್ಸ್ ನೀಡಿದೆ.
ಇನ್ನು ಅಬಕಾರಿ ಹಗರಣದಲ್ಲಿ ಕೆ. ಕವಿತಾ ಹೆಸರು ಕೂಡ ಕೇಳಿಬಂದಿದ್ದು, ಸೌತ್ ಲಾಬಿಯಲ್ಲಿ ಇವರ ಪಾತ್ರವಿದೆ ಎನ್ನಲಾಗಿದೆ.