ಬೆಂಗಳೂರು, ಮಾ 08 (DaijiworldNews/SM): ವರ್ಷದ ಹಿಂದೆ ಕರಾವಳಿಯಲ್ಲಿ ಭಾರೀ ಸದ್ದು ಮಾಡಿದ್ದ ಹಿಬಾಬ್ ವಿಚಾರ ಬಳಿಕ ರಾಜ್ಯಾದ್ಯಂತ ಹರಿದಾಡಿ ಹಲವು ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದಂತಾಗಿತ್ತು. ಈ ಬಾರಿಯು ಇದೀಗ ಪರೀಕ್ಷೆ ಬಂದಿದ್ದು, ಅಮಾನತ್ತಾಗಿರುವ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲಿ ಎಂದು ಶಿಕ್ಷಣ ಸಚಿವ ನಾಗೇಶ್ ಅವರು ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದಕ್ಷಿಣ ಕನ್ನಡದ ಉಪ್ಪಿನಂಗಡಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧರಿಸಿಕೊಂಡೇ ತರಗತಿಗೆ ಬರುತ್ತಿದ್ದ 6 ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿತ್ತು. ಈ ಪೈಕಿ ಮೂವರು ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಉಳಿದ ಮೂರು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿ ಎಂದು ಸಲಹೆ ನೀಡುತ್ತೇನೆ ಎಂದರು.
ಇನ್ನೂ, ವಿದ್ಯಾರ್ಥಿಗಳಿಗೆ ಸಮವಸ್ತ್ರ ಪಾಲನೆ ಕಡ್ಡಾಯವಾಗಿದೆ. ಕಳೆದ ವರ್ಷದ ನಿಯಮವೇ ಈ ವರ್ಷವೂ ಜಾರಿಯಲ್ಲಿರುತ್ತದೆ. ಅಲ್ಲದೆ, ಕಳೆದ ಬಾರಿ ಆರು ವಿದ್ಯಾರ್ಥಿಗಳು ಈ ನಿಯಮದಡಿ ಪರೀಕ್ಷೆ ಬರೆದಿಲ್ಲ ಎಂದು ಹೇಳಿದರು.