ಜಮ್ಮು- ಕಾಶ್ಮೀರ, ಮಾ 09 (DaijiworldNews/MS): ಪಾಕಿಸ್ತಾನದ ವಿವಿಧ ಕಾಲೇಜುಗಳಲ್ಲಿ ಜಮ್ಮು ಕಾಶ್ಮೀರದ ಸ್ಥಳೀಯರಿಗೆ ಎಂಬಿಬಿಎಸ್ ಸೀಟು ಹಂಚಿಕೆ ದಂಧೆಗೆ ಸಂಬಂಧಿಸಿದಂತೆ ಕಾಶ್ಮೀರದ ಒಂಬತ್ತು ಸ್ಥಳಗಳಲ್ಲಿ ಗುರುವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪಾಕಿಸ್ತಾನದ ವಿವಿಧ ಕಾಲೇಜುಗಳಲ್ಲಿ ಜಮ್ಮು ಕಾಶ್ಮೀರದ ನಿವಾಸಿಗಳಿಗೆ ಎಂಬಿಬಿಎಸ್ ಸೀಟುಗಳ ಹಂಚಿಕೆಗೆ ಸಂಬಂಧಿಸಿದಂತೆ ಶ್ರೀನಗರ ಜಿಲ್ಲೆಯ ಮೂರು ಸ್ಥಳಗಳಲ್ಲಿ ಸೇರಿದಂತೆ ಇಡಿ ದಾಳಿಗಳನ್ನು ಪ್ರಾರಂಭಿಸಿದೆ ಎಂದು ಐಎಎನ್ಎಸ್ಗೆ ವರದಿ ಮಾಡಿದೆ.
ಅನಂತನಾಗ್ ಜಿಲ್ಲೆಯಲ್ಲೂ ಕಾರ್ಯಾಚರಣೆ ನಡೆಯುತ್ತಿವೆ ಎಂದು ವರದಿಯಾಗಿದೆ. ಈ ಕಾರ್ಯಾಚರಣೆಗೆ ಸ್ಥಳೀಯ ಪೊಲೀಸರು ಮತ್ತು ಸಿಆರ್ಪಿಎಫ್ ಸಿಬ್ಬಂದಿ ಇಡಿ ಅಧಿಕಾರಿಗಳಿಗೆ ನೆರವಾಗಿದ್ದಾರೆ ಎಂದು ತಿಳಿದುಬಂದಿದೆ.