ಕೊಚ್ಚಿ, ಮಾ 09 (DaijiworldNews/MS): ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿಯನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ವಯನಾಡು ಮೂಲದ ಶಫಿಯನ್ನು 1487 ಗ್ರಾಂ ಚಿನ್ನಾಭರಣದೊಂದಿಗೆ ಕೊಚ್ಚಿಯಲ್ಲಿ ಕಸ್ಟಮ್ಸ್ ಪ್ರಿವೆಂಟಿವ್ ಕಮಿಷನರೇಟ್ ಪೊಲೀಸರು ಬಂಧಿಸಿದ್ದಾರೆ.
ಬೆಹ್ರೇನ್-ಕೋಝಿಕೋಡ್-ಕೊಚ್ಚಿ ಮಧ್ಯೆ ಸಂಚಾರ ನಡೆಸುತ್ತಿದ್ದ ವಿಮಾನ ಸೇವೆಯ ಕ್ಯಾಬಿನ್ ಸಿಬ್ಬಂದಿ ಶಫಿ ಎಂಬಾತ ಚಿನ್ನ ತರುತ್ತಿದ್ದ ಎಂಬ ಗೌಪ್ಯ ಮಾಹಿತಿ ಕಸ್ಟಮ್ಸ್ ಪ್ರಿವೆಂಟಿವ್ ಕಮಿಷನರೇಟ್ಗೆ ಲಭಿಸಿತ್ತು
ಈ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಕೈಗಳಿಗೆ ಚಿನ್ನವನ್ನು ಸುತ್ತಿಕೊಂಡು ಅಂಗಿಯ ತೋಳನ್ನು ಮುಚ್ಚಿ ಹಸಿರು ಚಾನಲ್ ಮೂಲಕ ಹಾದುಹೋಗುವುದು ಆತನ ಗುರಿಯಾಗಿತ್ತು.
ಸದ್ಯ ಆರೋಪಿ ಶಫಿಯನ್ನು ಬಂಧನ ಮಾಡಿರುವ ಅಧಿಕಾರಿಗಳು ಚಿನ್ನ ಕಳ್ಳ ಸಾಗಾಣೆಗೆ ಸಂಬಂಧಿಸಿದಂತೆ ಆತನನ್ನು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.