ಬೆಂಗಳೂರು, ಮಾ 09 (DaijiworldNews/MS): ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ತಿಪಟೂರಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.
ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಆರಂಭವಾಗಿದ್ದು, ಮಾ.೨೯ರವರೆಗೆ ಪರೀಕ್ಷೆ ಮುಂದುವರಿಯಲಿದೆ. ರಾಜ್ಯದಲ್ಲಿ ಈ ಬಾರಿ 7.26 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ .ಇಂದಿನಿಂದ ದ್ವಿತೀಯ ಪಿಯು ಕನ್ನಡ ವಿಷಯದ ಪರೀಕ್ಷೆ ರಾಜ್ಯದ 1,109 ಕೇಂದ್ರಗಳಲ್ಲಿ ಗುರುವಾರ ಶಾಂತಿಯುತವಾಗಿ, ಸುಸೂತ್ರವಾಗಿ ನೆರವೇರಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಇಲ್ಲದೇ ಸಮವಸ್ತ್ರದಲ್ಲೇ ಬಂದು ಪರೀಕ್ಷೆ ಬರೆದಿದ್ದಾರೆ.