ನವದೆಹಲಿ:, ಮಾ 10 (DaijiworldNews/HR): ಭೂಮಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ದೆಹಲಿ ನಿವಾಸದ ಮೇಲೆ ದಾಳಿ ನಡೆಸಿದೆ.
ಲಾಲು ಪ್ರಸಾದ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರನ್ನು ಒಳಗೊಂಡಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು 15 ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.
ಇನ್ನು ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪತ್ನಿ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರನ್ನು ಮಂಗಳವಾರ ಏಜೆನ್ಸಿಯು ಸುಮಾರು ಎರಡು ಗಂಟೆಗಳ ಕಾಲ ಪ್ರಶ್ನಿಸಿದ ನಂತರ ಈ ಬೆಳವಣಿಗೆ ನಡೆದಿದೆ.