ನವದೆಹಲಿ, ಮಾ 10 (DaijiworldNews/HR): ಲೋಕಾಯುಕ್ತ ದಾಳಿ ವೇಳೆ ಕೋಟ್ಯಾಂತರ ರೂಪಾಯಿ ನಗದು ಸಿಕ್ಕರೂ ಕರ್ನಾಟಕದ ಬಿಜೆಪಿ ಶಾಸಕನನ್ನು ಏಕೆ ಬಂದಿಸಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಲಂಚ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದ ಕರ್ನಾಟಕದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಉದಾಹರಣೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಬಂಧಿಸಿದ ನೀವು, ಬಿಜೆಪಿ ಶಾಸಕನನ್ನು ಏಕೆ ಬಂಧಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.
ಇನ್ನು ಮನೀಷ್ ಸಿಸೋಡಿಯಾ ಅವರ ಮನೆಯಲ್ಲಿ ನಡೆದ ದಾಳಿಯಲ್ಲಿ ಏನೂ ಪತ್ತೆಯಾಗಿಲ್ಲ. ಆದರೂ ಸಿಬಿಐ, ಇಡಿ(ಜಾರಿ ನಿರ್ದೇಶನಾಲಯ) ಎಲ್ಲಾ ಸೆಕ್ಷನ್ಗಳನ್ನು ಅನ್ವಯಿಸಿ ಅವರನ್ನು ಬಂಧಿಸಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.