ನವದೆಹಲಿ, ಮಾ 10 (DaijiworldNews/HR): ದೆಹಲಿ ಸರ್ಕಾರದ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಶುಕ್ರವಾರ ಎಎಪಿ ನಾಯಕ ಮತ್ತು ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಮಾರ್ಚ್ 17 ರವರೆಗೆ ಇಡಿ ಕಸ್ಟಡಿಗೆ ಕಳುಹಿಸಿದೆ.
ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್ ಆದೇಶವನ್ನು ಓದಲು ಬರಲಿಲ್ಲ. ನ್ಯಾಯಾಲಯದ ಸಿಬ್ಬಂದಿ ಮೂಲಕ ವಕೀಲರಿಗೆ ಮಾಹಿತಿ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇನ್ನು ದೆಹಲಿ ಅಬಕಾರಿ ನೀತಿಯಲ್ಲಿನ ಭ್ರಷ್ಟಾಚಾರದ ತನಿಖೆ ನಡೆಸುತ್ತಿರುವ ಸಿಬಿಐ ಸಲ್ಲಿಸಿದ ಪ್ರಕರಣದಲ್ಲಿ ಜಾಮೀನು ವಿಚಾರಣೆಯ ಒಂದು ದಿನದ ಮೊದಲು ಇಡಿ ಗುರುವಾರ ಸಿಸೋಡಿಯಾ ಅವರನ್ನು ತಿಹಾರ್ ಜೈಲಿನಲ್ಲಿ ಬಂಧಿಸಿದೆ.