ಬೆಂಗಳೂರು, ಮಾ 11 (DaijiworldNews/MS): ಕರ್ನಾಟಕ ವಿಧಾನಸಭಾ ಚುನಾವಣೆಗೆ ಪ್ರಚಾರ ಸಮಿತಿಯ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದೆ. ಈ ಕುರಿತಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇಂದ್ರ ಕಚೇರಿ ಉಸ್ತುವಾರಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೇ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ, ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸುವ ಸ್ಪಷ್ಟ ಸೂಚನೆಯನ್ನು ಬಿಜೆಪಿಯೂ ನೀಡಿದೆ.
ಪ್ರಚಾರ ಸಮಿತಿ ಸದಸ್ಯರಾಗಿ,ಬಿ.ಎಸ್.ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್, ಡಿ.ವಿ.ಸದಾನಂದಗೌಡ, ಜಗದೀಶ ಶೆಟ್ಟರ್, ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ, ಬಿ.ಶ್ರೀರಾಮುಲು, ಆರ್.ಅಶೋಕ, ಶಶಿಕಲಾ ಜೊಲ್ಲೆ, ಸಿ.ಸಿ.ಪಾಟೀಲ, ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಪ್ರಭು ಚವ್ಹಾಣ, ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಸಿ.ಟಿ.ರವಿ, ವಿ. ಶ್ರೀನಿವಾಸಪ್ರಸಾದ್, ಪಿ.ಸಿ.ಮೋಹನ್, ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ರಮೇಶ ಜಾರಕಿಹೊಳಿ, ಬಿ.ವೈ.ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಿಸಲಾಗಿದೆ.
ಚುನಾವಣಾ ನಿರ್ವಹಣಾ ಸಮಿತಿ ಸದಸ್ಯರಾಗಿ, ಭಗವಂತ ಖೂಬಾ, ಕೋಟ ಶ್ರೀನಿವಾಸಪೂಜಾರಿ, ಅರವಿಂದ ಲಿಂಬಾವಳಿ, ರಘುನಾಥರಾವ್ ಮಲ್ಕಾಪುರೆ, ನಿರ್ಮಲ್ಕುಮಾರ್ ಸುರಾನ, ತೇಜಸ್ವಿನಿ ಅನಂತಕುಮಾರ್, ಎನ್.ರವಿಕುಮಾರ್, ಸಿದ್ದರಾಜು, ಅಶ್ವತ್ಥನಾರಾಯಣ, ಮಹೇಶ್ ಟೆಂಗಿನಕಾಯಿ, ಎಸ್.ಕೇಶವಪ್ರಸಾದ್, ಛಲವಾದಿ ನಾರಾಯಣಸ್ವಾಮಿ, ಗೀತಾ ವಿವೇಕಾನಂದ ಅವರನ್ನು ನೇಮಿಸಲಾಗಿದೆ.