ಮೈಸೂರು, ಮಾ 11 (DaijiworldNews/HR): ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ (61) ಅವರು ಇಂದು ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದು, ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಧ್ರುವನಾರಾಯಣ ನಿಧನದಿಂದ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥನೆ ಮಾಡಿಕೊಳ್ಳುತ್ತೇನೆ. ಅವರ ಕುಟುಂಬಕ್ಕೆ ದು:ಖ ಭರಿಸುವ ಶಕ್ತಿ ದೇವರು ನೀಡಲಿ ಎಂದಿದ್ದಾರೆ.
ಇನ್ನು ಆರ್. ಧ್ರುವನಾರಾಯಣ ನಿಧನಕ್ಕೆ ವಿವಿಧ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದು, ಅವರ ಅಗಲಿಕೆಯಿಂದ ಕಾಂಗ್ರೆಸ್ ನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.