ನವದೆಹಲಿ, ಮಾ 11 (DaijiworldNews/HR): ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಸಚೇತಕರಾಗಿ ರಜನಿ ಪಾಟೀಲ್, ಉಪ ನಾಯಕರಾಗಿ ಪ್ರಮೋದ್ ತಿವಾರಿ ನೇಮಕ ಮಾಡಲಾಗಿದೆ ಎಂದು ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 'ಮೈಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಅವರು ಪ್ರಮೋದ್ ತಿವಾರಿ ಅವರನ್ನ ಉಪ ನಾಯಕರಾಗಿ ಮತ್ತು ಶ್ರೀಮತಿ ರಜನಿ ಪಾಟೀಲ್ ಅವರನ್ನ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಸಚೇತಕರಾಗಿ ನೇಮಕ ಮಾಡಲು ಅನುಮೋದನೆ ನೀಡಿದ್ದಾರೆ ಎಂದರು.
ಇನ್ನು ಈ ನೇಮಕಾತಿಗಳ ಬಗ್ಗೆ ರಾಜ್ಯಸಭೆಯ ಅಧ್ಯಕ್ಷರಿಗೆ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.