ಪಶ್ಚಿಮ ಬಂಗಾಳ, ಮಾ 12 (DaijiworldNews/DB): ವಂದೇ ಭಾರತ್ ಎಕ್ಸ್ಪ್ರೆಸ್ ಮೇಲೆ ಕಲ್ಲು ತೂರಾಟ ಘಟನೆಗಳು ಪದೇ ಪದೇ ಮರು ಕಳಿಸುತ್ತಿದ್ದು, ಇದೀಗ ಪಶ್ಚಿಮ ಬಂಗಾಳದಲ್ಲಿ ಮತ್ತೆ ಕಲ್ಲು ತೂರಾಟ ನಡೆದಿದೆ.
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಫರಕ್ಕಾ ಬಳಿ ಶನಿವಾರ ತಡರಾತ್ರಿ ದುಷ್ಕರ್ಮಿಗಳು ವಂದೇ ಭಾರತ್ ಎಕ್ಸ್ಪ್ರೆಸ್ಗೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಕೋಚ್ನ ಕಿಟಕಿ ಗಾಜುಗಳಿಗೆ ಹಾನಿ ಉಂಟಾಗಿದೆ ಎಂದು ಪೂರ್ವ ರೈಲ್ವೆ ತಿಳಿಸಿದೆ.
ಘಟನೆ ಅತ್ಯಂತ ದುರದೃಷ್ಟಕರವಾಗಿದೆ. ಈ ಸಂಬಂಧ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ರೈಲ್ವೇ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.