ನವದೆಹಲಿ, ಮಾ 12 (DijiworldNews/HR): ರಾಜಕೀಯ ದಾಳಿಗಳನ್ನು ನಡೆಸಲು ತನಿಖಾ ಸಂಸ್ಥೆಗಳನ್ನು ಬಳಸುವಲ್ಲಿ ಬಿಜೆಪಿಯು ಕಾಂಗ್ರೆಸ್ ನ ಹೆಜ್ಜೆಗಳನ್ನು ಅನುಸರಿಸುತ್ತಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬಿಜೆಪಿಯು ಅದೇ ಮಾರ್ಗವನ್ನು ಅನುಸರಿಸುವ ಮೂಲಕ ಹೊಸದನ್ನು ಏನನ್ನೂ ಮಾಡುತ್ತಿಲ್ಲ, ಇಂದು ಕಾಂಗ್ರೆಸ್ ನೆಲಸಮಗೊಂಡಿದೆ, ಬಿಜೆಪಿಯ ಭವಿಷ್ಯವೂ ಅದೇ ಆಗಲಿದೆ ಎಂದರು.
ಇನ್ನು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಜಾರಿ ನಿರ್ದೇಶನಾಲಯ (ಇಡಿ), ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಯನ್ನು ಬಳಸಿಕೊಂಡು ದೇಶದ ಹಲವು ರಾಜಕೀಯ ನಾಯಕರ ಮೇಲೆ ದಾಳಿ ನಡೆಸಿತ್ತು. ಬಿಜೆಪಿಯು ಅದೇ ಮಾರ್ಗವನ್ನು ಅನುಸರಿಸುತ್ತಿದೆ ಎಂದು ಹೇಳಿದ್ದಾರೆ.