ಹೈದರಾಬಾದ್, ಮಾ 12 (DijiworldNews/HR): ಭಯೋತ್ಪಾದನೆ ಮತ್ತು ಹಿಂಸಾಚಾರಕ್ಕೆ ದೇಶದಲ್ಲಿ ಅವಕಾಶವಿಲ್ಲ. ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿಯನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮತ್ತಷ್ಟು ಕಠಿಣ ಮಾರ್ಗಗಳಲ್ಲಿ ಮುಂದುವರೆಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ತೆಲಂಗಾಣದ ಹೈದರಾಬಾದ್ನಲ್ಲಿ ಸಿಐಎಸ್ಎಫ್ನ 54ನೇ ರೈಸಿಂಗ್ ಡೇ ಪರೇಡ್ನಲ್ಲಿ ಮಾತನಾಡಿದ ಅವರು, ದೇಶದ ಯಾವುದೇ ಭಾಗದಲ್ಲಿ ಪ್ರತ್ಯೇಕತಾವಾದ, ಭಯೋತ್ಪಾದನೆ ಮತ್ತು ದೇಶ ವಿರೋ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಮತ್ತಷಟು ದೃಢವಾಗಿ ಎದುರಿಸಲಾಗುವುದು ಎಂದರು.
ಇನ್ನು ಕಳೆದ ಒಂಬತ್ತು ವರ್ಷಗಳಲ್ಲಿ ಎನ್ಡಿಎ ಸರ್ಕಾರವು ಆಂತರಿಕ ಭದ್ರತಾ ಸವಾಲುಗಳನ್ನು ಯಶಸ್ವಿಯಾಗಿ ನಿಭಾಯಿಸಿದೆ ಎಂದು ಹೇಳಿದ್ದಾರೆ.