ಹೈದರಾಬಾದ್, ಮಾ 12 (DijiworldNews/HR): ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಹೈದರಾಬಾದ್ನ ಎಐಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಂದ್ರಶೇಖರ್ ರಾವ್ ಅವರನ್ನು ಪರೀಕ್ಷೆಗೆ ಒಳಪಡಿಸಿದಂತ ವೈದ್ಯರು, ಅವರ ಹೊಟ್ಟೆಯಲ್ಲಿ ಹುಣ್ಣು ಆಗಿದೆ ಎಂಬುದಾಗಿ ತಿಳಿಸಿದ್ದಾರೆ.
ಇನ್ನು ಅವರ ಹೊಟ್ಟೆಯಲ್ಲಿ ಸಣ್ಣ ಹುಣ್ಣು ಕಾಣಿಸಿಕೊಂಡಿದ್ದು, ಚಿಕಿತ್ಸೆ ಆರಂಭಿಸಲಾಗಿದ್ದು, ಯಾವುದೇ ಸಮಸ್ಯೆ ಇಲ್ಲ ಎಂಬುದಾಗಿ ಆಸ್ಪತ್ರೆಗೆಯ ತಜ್ಞ ವೈದ್ಯರು ತಿಳಿಸಿದ್ದಾರೆ.