ನವದೆಹಲಿ, ಮಾ 13 (DaijiwordNews/HR): ಲಂಡನ್ನಲ್ಲಿ ಭಾರತೀಯ ಪ್ರಜಾಪ್ರಭುತ್ವದ ಬಗ್ಗೆ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಬಜೆಟ್ನ ಎರಡನೇ ಹಂತದ ಸಭೆ ಇಂದು ಆರಂಭವಾಗುತ್ತಿದ್ದಂತೆ ಸಂಸತ್ತಿನಲ್ಲಿ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.
ದೇಶ ಮತ್ತು ಪ್ರಜಾಪ್ರಭುತ್ವವನ್ನು ಅವಮಾನಿಸಿರುವ ರಾಹುಲ್ ಗಾಂಧಿ ಸದನದ ಮುಂದೆ ಕ್ಷಮೆಯಾಚಿಸಬೇಕು ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಒತ್ತಾಯಿಸಿದ್ದಾರೆ.
ಇನ್ನು ಭಾರತದ ಸಂಸತ್ತಿನಲ್ಲಿ ಪ್ರತಿಪಕ್ಷಗಳ ಮೈಕ್ಗಳು ಕಾರ್ಯನಿರ್ವಹಿಸುವುದಿಲ್ಲ. ಸರಿಯಾದ ಸ್ಥಿತಿಯಲ್ಲಿದ್ದರೂ, ಅವುಗಳನ್ನು ಸ್ವಿಚ್ ಆನ್ ಮಾಡುವುದ ಕಷ್ಟ. ತಾನು ಮಾತನಾಡುವಾಗ ಅನೇಕ ಬಾರಿ ಅನುಭವವಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದರು.
ರಾಹುಲ್ ಗಾಂಧಿ ಮಾತಿಗೆ ಧಾರವಾಡದಲ್ಲಿ ತಿರುಗೇಟು ನೀಡಿದ ಪ್ರಧಾನಿ, ಈ ಜಗತ್ತಿನ ಯಾವ ಶಕ್ತಿಯೂ ಭಾರತದ ಪ್ರಜಾಪ್ರಭುತ್ವ ಸಂಪ್ರದಾಯಗಳಿಗೆ ಧಕ್ಕೆ ತರಲು ಸಾಧ್ಯವಿಲ್ಲ ಎಂದಿದ್ದಾರೆ.