ಬೆಂಗಳೂರು, ಮಾ 14 (DaijiworldNews/MS): ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ರೈಲು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಡ್ರಮ್ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.
ಕಳೆದ ಎರಡು ತಿಂಗಳ ಹಿಂದೆ ಮಹಿಳೆಯರ ಶವವನ್ನು ಡ್ರಮ್ ಹಾಗೂ ಚೀಲದಲ್ಲಿ ತುಂಬಿಕೊಂಡು ಬಂದು ಯಶವಂತಪುರ ಹಾಗೂ ಬೈಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣದ ಇಟ್ಟು ಹೋಗಿದ್ದರು. ಇದೀಗ ಇದೇ ಮಾದರಿಯಲ್ಲಿ ಈ ಪ್ರಕರಣವೂ ನಡೆದಿದೆ
ಮೂವರು ವ್ಯಕ್ತಿಗಳು ಡ್ರಮ್ ನ್ನು ಹೊತ್ತೊಯ್ದು ರೈಲು ನಿಲ್ದಾಣದಲ್ಲಿ ಬಿಟ್ಟಿರುವ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದ್ದು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಹಂತಕರು ಬೆಳಗ್ಗೆ 10-11 ಗಂಟೆ ಸುಮಾರಿಗೆ ಡ್ರಮ್ ತಂದಿಟ್ಟಿದ್ದಾರೆ. ಮೂವರು ಡ್ರಮ್ ತಂದಿಟ್ಟು ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಮಹಿಳೆ 32-35 ವರ್ಷದ ಆಸುಪಾಸಿನವಳೆಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಸರಣಿ ಹಂತಕ ಕೈವಾಡವಿರುವ ಶಂಕೆ ಶುರುವಾಗಿದೆ. ಸದ್ಯ ಈ ಹಿಂದಿನ ಪ್ರಕರಣಗಳ ಜೊತೆಗೆ ಈಗ ಪತ್ತೆಯಾಗಿರುವ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ರೈಲ್ವೆ ಪೊಲೀಸರು ಹಂತಕರ ಪತ್ತೆಗೆ ತೀವ್ರ ಶೋಧ ನಡೆಸಿದ್ದಾರೆ.