ನವದೆಹಲಿ, ಮಾ 17(DaijiworldNews/MS): ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ರಾಹುಲ್ ಗಾಂಧಿ ಕ್ಷಮೆ ಯಾಚಿಸುವಂತಹ ಬಿಜೆಪಿ ಪಟ್ಟು ಹಿಡಿದಿದೆ ಇದರ ನಡುವೆ ಸರಕಾರದ ಕ್ರಮವನ್ನು ವಿರೋಧಿಸಿ ಪ್ರತಿಪಕ್ಷಗಳು ಸಂಸದರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕಾಂಗ್ರೆಸ್ ಸೇರಿದಂತೆ 16 ವಿರೋಧ ಪಕ್ಷಗಳು ಗಾಂಧಿ ಪ್ರತಿಮೆ ಬಳಿ ಧರಣಿ ಕುಳಿತಿದ್ದು ಇದರಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಕೂಡ ಭಾಗಿಯಾಗಿದ್ದಾರೆ ಅದಾನಿ ಪ್ರಕರಣದ ಕುರಿತು ತನಿಖೆ ನಡೆಸುವಂತೆ ವಿಪಕ್ಷಗಳು ಒತ್ತಾಯಿಸಿವೆ.
ಅದಾನಿ ಗ್ರೂಪ್ ಪ್ರಕರಣದ ಕುರಿತಂತೆ ಪ್ರತಿಪಕ್ಷಗಳು ಜಂಟಿ ಸಂಸದೀಯ ಸಮಿತಿ(ಜೆಪಿಸಿ)ಯ ತನಿಖೆಗೆ ಒತ್ತಾಯಿಸಿದವು.