ನವದೆಹಲಿ, ಮಾ 17 (DaijiworldNews/HR): ಪ್ರಜಾಪ್ರಭುತ್ವದ ಬಗ್ಗೆ ಚರ್ಚೆ ಮಾಡುವವರು ದೇಶ ವಿರೋಧಿಗಳೇ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪ್ರಶ್ನಿಸಿದ್ದಾರೆ.
ರಾಹುಲ್ ಗಾಂಧಿ ಲಂಡನ್ ಭೇಟಿಯ ವೇಳೆ ಮಾಡಿದ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ನಡ್ಡಾ ಒತ್ತಾಯಿಸಿದದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಖರ್ಗೆ, ಬಿಜೆಪಿಯವರು ಸ್ವತಃ ರಾಷ್ಟ್ರವಿರೋಧಿಗಳು. ಅವರು ಎಂದಿಗೂ ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಲಿಲ್ಲ, ಬ್ರಿಟಿಷರಿಗಾಗಿ ಕೆಲಸ ಮಾಡಿದವರು ಇತರರನ್ನು ದೇಶವಿರೋಧಿಗಳು ಎಂದು ಕರೆಯುತ್ತಿದ್ದಾರೆ. ಅವರು ನಿರುದ್ಯೋಗ ಮತ್ತು ಹಣದುಬ್ಬರದ ಸಮಸ್ಯೆಗಳಿಂದ ವಿಮುಖರಾಗಲು ಈ ರೀತಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಜೆಪಿ ನಡ್ಡಾ ಅವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ, ಕ್ಷಮೆಯಾಚಿಸುವುದರಲ್ಲಿ ಅರ್ಥವಿಲ್ಲ, ನಾವು ಸಂಸತ್ತಿನಲ್ಲಿ ಇದಕ್ಕೆ ಬಲವಾದ ಉತ್ತರವನ್ನು ನೀಡುತ್ತೇವೆ ಎಂದು ಹೇಳಿದ್ದಾರೆ.