ನವದೆಹಲಿ, ಮಾ 18(DaijiworldNews/MS): ಕರ್ನಾಟಕ ರಾಜ್ಯ ಚುನಾವಣಾ ಕಾವೇರುತ್ತಿದ್ದು ಎಲೆಕ್ಷನ್ ಘೋಷಣೆಗೆ ಕೆಲವೇ ದಿನಗಳು ಬಾಕಿ ಇವೆ. ಈ ನಡುವೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಗೊಂದಲಕಾರಿಯಾಗಿದೆ.
ಕೋಲಾರ ಕ್ಷೇತ್ರದಿಂದಲೇ ಸ್ಪರ್ಧೆ ಎಂದು ಅಲ್ಲಿ ಅದ್ದೂರಿ ಸಮಾವೇಶ, ರ್ಯಾಲಿ ಮಾಡಿ ಸಿದ್ದರಾಮಯ್ಯ ಮತಯಾಚನೆ ಮಾಡಿದ್ದರು. ಆದರೆ ಸಿಇಸಿ ಸಭೆಯ ಬಳಿಕ ನಿನ್ನೆ ದೆಹಲಿಯಲ್ಲಿ ಸಿದ್ದು ಆಡಿದ ಮಾತುಗಳು ಅನುಮಾನಕ್ಕೆ ಕಾರಣವಾಗಿದೆ. "ಸಭೆಯಲ್ಲಿ ನನ್ನ ಟಿಕೆಟ್ ಕ್ಲಿಯರ್ ಆಗಿಲ್ಲ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ಮಾಡಲಿ" ಎಂದಿರುವುದು ಕೋಲಾರ ಕ್ಷೇತ್ರದಿಂದ ಸ್ಪರ್ಧೆಯ ಖಚಿತತೆ ಇಲ್ಲದಿರುವುದಕ್ಕೆ ಇನ್ನಷ್ಟು ಪುಷ್ಟಿ ಕೊಡುತ್ತದೆ.
ಸಿದ್ದರಾಮಯ್ಯ ಅವರಿಗೆ ಕೋಲಾರ ಕ್ಷೇತ್ರ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯರಿಗೆ ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಹಾಗೂ ಕೋಲಾರದಿಂದ ಹಿಂದೆ ಸರಿಯುವಂತೆ ಸಲಹೆ ನೀಡಿದ್ದಾರೆ ಎಂಬ ಬಗ್ಗೆ ಮೂಲಗಳಿಂದ ಮಾಹಿತಿ ಸಿಕ್ಕಿದೆ.