ನವದೆಹಲಿ, ಮಾ (DaijiworldNews/HR): ಕಾಂಗ್ರೆಸ್ ಪಕ್ಷವನ್ನು ಕೈಬಿಟ್ಟು ಮೈತ್ರಿ ಮಾಡಿಕೊಳ್ಳಲು ಮುಂದಾದ ಉತ್ತರ ಪ್ರದೇಶದ ಸಮಾಜವಾದಿ ಪಕ್ಷ ಮತ್ತು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷ.
ಎಸ್ಪಿ ನಾಯಕ ಅಖಿಲೇಶ್ ಯಾದವ್ ಮತ್ತು ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭೇಟಿ ವೇಳೆ ಈ ಒಪ್ಪಂದಕ್ಕೆ ಬರಲಾಗಿದೆ.
ಇನ್ನು ಬಿಜೆಪಿ ವಿರುದ್ಧ ಹೋರಾಡಲು ನಾವೀಗ ರಚಿಸಿಕೊಂಡಿರುವ ಹೊಸ ಮೈತ್ರಿಯಲ್ಲಿ ಕಾಂಗ್ರೆಸ್ನ ಪಾತ್ರ ಏನೇನೂ ಇರುವುದಿಲ್ಲ. ಇನ್ನುಳಿದ ರಾಜಕೀಯ ಪಕ್ಷಗಳು ಅವಕ್ಕೆ ಏನಿಷ್ಟವೋ, ಅದನ್ನು ಮಾಡಬಹುದು ಎಂದು ಅಖಿಲೇಶ್ ಯಾದವ್ ತಿಳಿಸಿದ್ದಾರೆ.
ಮಾರ್ಚ್ 17ರಂದು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರನ್ನು ಕೋಲ್ಕತ್ತದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಹೊಸ ನಿರ್ಧಾರಕ್ಕೆ ಬಂದಿದ್ದಾರೆ.