ಜಮ್ಮು ಮತ್ತು ಕಾಶ್ಮೀರ, ಮಾ 19 (DaijiworldNews/HR): ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ದಕ್ಷಿಣ ಕಾಶ್ಮೀರ ಜಿಲ್ಲೆಯ ಬರ್ಸೂ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ 4 ಮಂದಿ ಮೃತಪಟ್ಟಿದ್ದು, 28 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಬಿಹಾರ ಮೂಲದ ನಾಲ್ವರು ಮೃತಪಟ್ಟಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಪುಲ್ವಾಮಾ ಡೆಪ್ಯುಟಿ ಕಮಿಷನರ್ (ಡಿಸಿ) ಬಸೀರ್ ಉಲ್ ಹಕ್ ಪ್ರತಿ ಸಂತ್ರಸ್ತರ ಕುಟುಂಬಕ್ಕೆ ತಲಾ 1 ಲಕ್ಷ ರೂ. ಸಹಾಯವನ್ನು ಘೋಷಿಸಿದ್ದಾರೆ ಎಂದು ತಿಳಿಸಿದ್ದಾರೆ.