ಬೆಳಗಾವಿ, ಮಾ 20 (DaijiworldNews/HR): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕರ್ನಾಟಕಕ್ಕೆ ಕರೆಯಿಸಿ ಅವರ ಕೈಯಿಂದ ನಾಲ್ಕನೇ ಗ್ಯಾರಂಟಿ ಬಿಡುಗಡೆ ಮಾಡಲಾಗಿದ್ದು, ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ನೀಡುವ ಭರವಸೆ ನೀಡಲಾಗಿದೆ.
ಕಾಂಗ್ರೆಸ್ ಪಕ್ಷ ಯುವ ಸಬಲೀಕರಣಕ್ಕೆ ಈ ಗ್ಯಾರಂಟಿ ನಂ.4 ಘೋಷಿಸಿದೆ. 2 ವರ್ಷಗಳವರೆಗೆ ಪ್ರತಿ ತಿಂಗಳು ರಾಜ್ಯದ ನಿರುದ್ಯೋಗಿಗಳಿಗೆ ಆರ್ಥಿಕ ನೆರವು ನೀಡುವುದಾಗಿ ಕಾಂಗ್ರೆಸ್ ಘೋಷಿಸಿದೆ. ನಿರುದ್ಯೋಗಿ ಪದವೀಧರರಿಗೆ 3000 ರೂಪಾಯಿ ಹಾಗೂ ನಿರುದ್ಯೋಗಿ ಡಿಪ್ಲೊಮಾ ಪದವೀಧರರಿಗೆ 1500 ರೂಪಾಯಿ ನಿರುದ್ಯೋಗ ಭತ್ಯೆ ನೀಡುವ ಯೋಜನೆಯನ್ನು ಕಾಂಗ್ರೆಸ್ ನಾಯಕರು ಘೋಷಿಸಿದ್ದಾರೆ.
ಇನ್ನು ಬೆಳಗಾವಿಯಲ್ಲಿ ಯುವಕ್ರಾಂತಿ ಸಮಾವೇಶ ಆಯೋಜಿಸಲಾಗಿದ್ದು, ಯುವ ನಿಧಿ ಹೆಸರಲ್ಲಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ನಾಲ್ಕನೇ ಗ್ಯಾರಂಟಿ ಬಿಡುಗಡೆ ಮಾಡಿದರು.