ರಾಯಚೂರು, ಮಾ 21 (DaijiworldNews/HR): ನಮ್ಮದು ರಾಷ್ಟ್ರೀಯ ಪಕ್ಷವಾಗಿರುವುದರಿಂದ ಯಾರಿಗೆ ಟಿಕೆಟ್ ನೀಡಬೇಕು ಎನ್ನುವುದನ್ನು ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ. ಯಾರೋ ಅಪ್ಪನ ಮಗ, ಅಣ್ಣನ ಮಗ ಎಂದು ಯಾರಿಗೂ ವಿಧಾನಸಭಾ ಟಿಕೆಟ್ ತೀರ್ಮಾನ ಮಾಡಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅಚರು, ನನ್ನ ವಿರುದ್ಧ ದೆಹಲಿ ನಾಯಕರಿಗೆ ದೂರು ಹೋಗಿದೆ ಎಂದರೆ ನಾನು ಅಷ್ಟು ಎತ್ತರಕ್ಕೆ ಬೆಳೆದಿದ್ದೇನೆ ಎಂದರ್ಥ ಎಂದಿದ್ದಾರೆ.
ಇನ್ನು ಅರ್ಹತೆಯ ಆಧಾರದಲ್ಲಿ ಯಾರೂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೋ ಅಂಥವರಿಗೆ ಟಿಕೆಟ್ ನೀಡಿದರೇ ಪಕ್ಷಕ್ಕೆ ಒಳ್ಳೆಯದು ಆಗುತ್ತದೆ ಎನ್ನುವುದು ಹಿರಿಯರಿಗೆ ಗೊತ್ತಿದೆ. ಕ್ಷೇತ್ರದಲ್ಲಿ ಕಾರ್ಯಕರ್ತರು ಒಪ್ಪಿಕೊಳ್ತಾರಾ, ಗೆಲುವಿನ ಸಂಭಾವ್ಯತೆ ಸೇರಿ ವಿವಿಧ ಮಾನದಂಡಗಳ ಆಧಾರದಲ್ಲಿ ಹಿರಿಯ ನಾಯಕರು ಟಿಕೆಟ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಳ್ತಾರೆ ಎಂದು ಹೇಳಿದ್ದಾರೆ.