ಬೆಂಗಳೂರು, ಮಾ. 23 (DaijiworldNews/HR): ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಇತಿಹಾಸವನ್ನು ಓದಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ, ಮೀಸಲಾತಿ ಬಗ್ಗೆ ಕಾಂಗ್ರೆಸ್ ಗೆ ಮಾತನಾಡುವ ನೈತಿಕ ಹಾಗೂ ರಾಜಕೀಯ ಅಧಿಕಾರವಿಲ್ಲ ಎಂದರು.
ಇನ್ನು ಈಗಾಗಲೇ ಮೀಸಲಾತಿಗೆ ಕಾನೂನು ರಚಿಸಿದ್ದು, ಆ ಪ್ರಕಾರ ನೇಮಕಾತಿ ಹಾಗೂ ಬಡ್ತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಸಂವಿಧಾನದ ಶೆಡ್ಯೂಲ್ 9 ಕ್ಕೆ ಸೇರಿಸಲು ಸಚಿವ ಸಂಪುಟದ ಅನುಮೋದನೆಯಾಗಿದ್ದು, ರಾಜ್ಯಪಾಲರಿಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.