ಜಾರ್ಖಂಡ್ , ಮಾ 24 (DaijiworldNews/MS): ಹೆರಿಗೆಯಾದ ತಕ್ಷಣ ಗಂಡು ಶಿಶುವನ್ನು ತಾಯಿಯೇ 4.5 ಲಕ್ಷಕ್ಕೆ ಮಾರಾಟ ಮಾಡಿರುವ ಘಟನೆ ಜಾರ್ಖಂಡ್ನ ಛತ್ರಾ ಜಿಲ್ಲೆಯಲ್ಲಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ನವಜಾತ ಶಿಶುವಿನ ತಾಯಿ ಆಶಾದೇವಿ ಸೇರಿದಂತೆ 11 ಜನರನ್ನು ಬಂಧಿಸಲಾಗಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಅವಿನಾಶ್ ಕುಮಾರ್ ತಿಳಿಸಿದ್ದಾರೆ.
ಛತ್ರ ಜಿಲ್ಲೆಯ ಮಕ್ಕಳ ಕಲ್ಯಾಣ ಇಲಾಖೆಯ ಉಪ ಆಯುಕ್ತ ಅಬು ಇಮ್ರಾನ್ ಮಾಹಿತಿ ನೀಡಿದ ಕೂಡಲೇ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು 24 ಗಂಟೆಗಳಲ್ಲಿ ಬೊಕಾರೊ ಜಿಲ್ಲೆಯಿಂದ ನವಜಾತ ಶಿಶುವನ್ನು ರಕ್ಷಿಸಿದ್ದಾರೆ ಎಂದು ಅವಿನಾಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಹಜಾರಿಬಾಗ್ ಜಿಲ್ಲೆಯ ಬಡ್ಕಗಾಂವ್ ಗ್ರಾಮದ ದಂಪತಿಗಳು ನವಜಾತ ಶಿಶುವನ್ನು 4.5 ಲಕ್ಷ ರೂ.ಗೆ ಮಾರಾಟ ಮಾಡಲು ಚಾತ್ರಾ ಮತ್ತು ಬೊಕಾರೊದ ಇಬ್ಬರು ದಲ್ಲಾಳಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎನ್ನಲಾಗಿದೆ.
ವಿಪರ್ಯಾಸವೆಂದರೆ ಮಗುವಿನ ತಾಯಿಗೆ 1 ಲಕ್ಷ ನೀಡಿದರೆ, ಉಳಿದ 3.5 ಲಕ್ಷವನ್ನು ದಲ್ಲಾಳಿಗಳಿಗೆ ಹಂಚಿಕೊಂಡಿದ್ದಾರೆ. ಸದರ್ ಆಸ್ಪತ್ರೆಯ ಉಪ ಅೀಧಿಕ್ಷಕ ವೈದ್ಯ ಮನೀಶ್ ಲಾಲ್ ಹೇಳಿಕೆ ಮೇರೆಗೆ ಛತ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.