ಬೆಂಗಳೂರು, ಮಾ 24 (DaijiworldNews/MS): ಕ್ಷೇತ್ರ ಶೋಧದಲ್ಲಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ವರುಣಾ ಕ್ಷೇತ್ರದ ಟಿಕೆಟ್ ನೀಡುವಂತೆ ಕೇಳಿದ್ದೇನೆ, ಎಲ್ಲಾ ನಿರ್ಧಾರವನ್ನು ಹೈಕಮಾಂಡ್ ಗೆ ಬಿಟ್ಟಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನಮ್ಮ ಮನೆಯಲ್ಲಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಹೇಳಿದ್ದಾರೆ. ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತೋ ಕಾದು ನೋಡಬೇಕಾಗಿದೆ ಎಂದಿದ್ದಾರೆ.
ವರುಣಾ ಕ್ಷೇತ್ರದ ಟಿಕೆಟ್ ನೀಡುವಂತೆ ಕೇಳಿದ್ದೇನೆ. ಚುನಾವಣೆ ಸ್ಪರ್ಧೆಗೆ 25ಕ್ಷೇತ್ರಗಳಿಗೆ ಆಹ್ವಾನ ನೀಡಿದ್ದಾರೆ. ಎಲ್ಲಾ ನಿರ್ಧಾರವನ್ನು ಹೈಕಮಾಂಡ್ ಗೆ ಬಿಟ್ಟಿದ್ದೇನೆ ಎಂದು ಹೇಳಿದ್ದಾರೆ.
ಕೋಲಾರದಿಂದಲೇ ಸ್ಪರ್ಧೆ ಮಾಡ್ತಾರೆ ಎಂಬುದು ಬಹುತೇಕ ಅಂತಿಮವಾಗಿತ್ತಾದರೂ ಹೈಕಮಾಂಡ್ನ ಅಣತಿಯಂತೆ ಕೋಲಾರವನ್ನು ಸಿದ್ದರಾಮಯ್ಯ ಕೈಬಿಟ್ಟಿದ್ದರು.