ನವದೆಹಲಿ, ಮಾ 25 (DaijiworldNews/HR): ನನ್ನನ್ನು ಶಾಶ್ವತವಾಗಿ ಅನರ್ಹಗೊಳಿಸಿದರೂ ನಾನು ಯಾರಿಗೂ ಹೆದರುವುದಿಲ್ಲ ಎಂದು ಕಾಂಗ್ರೆಸ್ ನ ರಾಹುಲ್ ಗಾಂಧಿ ಹೇಳಿದ್ದಾರೆ.
2019ರ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯದ ತೀರ್ಪಿನ ನಂತರ ಸಂಸದ ಸ್ಥಾನದಿಂದ ಅನರ್ಹಗೊಂಡ ರಾಹುಲ್ ಗಾಂಧಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿರುವ ಅವರು, ನಾನು ಯಾರಿಗೂ ಹೆದರುವುದಿಲ್ಲ, ಶಾಶ್ವತವಾಗಿ ನನ್ನನ್ನು ಅನರ್ಹಗೊಳಿಸಿದರೂ ನನ್ನ ಕೆಲಸವನ್ನು ಮಾಡುತ್ತೇನೆ ಎಂದರು.
ಇನ್ನು ಭಾರತದ ಜನರ ಪ್ರಜಾಸತ್ತಾತ್ಮಕ ಧ್ವನಿಯನ್ನು ರಕ್ಷಿಸಲು ನಾನು ಇಲ್ಲಿದ್ದೇನೆ. ಅದನ್ನು ಮುಂದುವರಿಸುತ್ತೇನೆ, ನಾನು ಯಾರಿಗೂ ಹೆದರುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರನ್ನು ರಕ್ಷಿಸಲು ಇದು ಸಂಪೂರ್ಣ ನಾಟಕವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಗುಜರಾತ್ನ ಸೂರತ್ನ ನ್ಯಾಯಾಲಯವು 2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯನ್ನು ತಪ್ಪಿತಸ್ಥರೆಂದು ಘೋಷಿಸಿ 2 ವರ್ಷ ಶಿಕ್ಷೆ ವಿಧಿಸಿದ್ದು, ಇದರಿಂದಾಗಿ ಅವರು ಸಂಸತ್ ಸದಸ್ಯ ಸ್ಥಾನದಿಂದ ಅಮಾನತುಗೊಂಡಿದ್ದಾರೆ.