ಗಾಂಧಿನಗರ, ಮಾ 25 (DaijiworldNews/HR): ಗುಜರಾತ್ನ ರಾಜ್ಕೋಟ್ನಲ್ಲಿ ಅಧಿಕಾರಿಯೊಬ್ಬರು 5 ಲಕ್ಷ ರೂಪಾಯಿ ಲಂಚ ಪಡೆಯುವಾಗ ಸಿಬಿಐ ಅಧಿಕಾರಿಗಳ ಬಲೆಗೆ ಸಿಕ್ಕಿ ಬಿದ್ದಿದ್ದು, ಅವಮಾನಿತರಾದ ಅವರು ಬಂಧನಕ್ಕೀಡಾದ ಕೆಲವೇ ಗಂಟೆಯಲ್ಲಿ ಸಿಬಿಐ ಕಚೇರಿಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
ವಿದೇಶಿ ವ್ಯಾಪಾರ ಮಹಾ ನಿರ್ದೇಶನಾಲಯದ ಜಂಟಿ ನಿರ್ದೇಶಕರಾದ ಜವರಿ ಮಲ್ ಬಿಷ್ಣೋಯಿ ಅವರು ಸಿಬಿಐ ಕಚೇರಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ನು ವ್ಯಕ್ತಿಯೊಬ್ಬರಿಗೆ ಲಂಚಕ್ಕೆ ಬೇಡಿಕೆ ಇಟ್ಟು, ಹಣ ಸ್ವೀಕರಿಸುವಾಗ ಅವರು ಸಿಬಿಐ ಅಧಿಕಾರಿಗಳ ಬಲೆಗೆ ಬಿದ್ದಿದ್ದು, ತನಿಖೆ ಹಿನ್ನೆಲೆಯಲ್ಲಿ ಅವರನ್ನು ಸಿಬಿಐ ಕಸ್ಟಡಿಗೆ ತೆಗೆದುಕೊಂಡಿತ್ತು. ಕಸ್ಟಡಿಯಲ್ಲಿದ್ದ ಬಿಷ್ಣೋಯಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.