ನವದೆಹಲಿ, ಮಾ 21(MSP): ಜಮ್ಮು ಕಾಶ್ಮೀರದ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ನಡೆಸಿದ್ದು ಗುರುವಾರ ಪಾಕ್ ನ ನಡೆಸಿದ ಶೆಲ್ ದಾಳಿಯಿಂದ ಭಾರತೀಯ ಸೇನೆಯ ಯೋಧ ಹುತಾತ್ಮರಾಗಿದ್ದಾರೆ.ಮೃತ ಯೋಧನನ್ನು ರೈಫಲ್ ಮ್ಯಾನ್ ಯಶ್ ಪೌಲ್ (24) ಎಂದು ಗುರುತಿಸಲಾಗಿದೆ.
ಇನ್ನೊಂದೆಡೆ ಜಮ್ಮು ಕಾಶ್ಮೀರದ ಗಡಿ ಭಾಗದಲ್ಲಿ ಗುರುವಾರ ಬೆಳಗ್ಗೆ ಉಗ್ರರು ಭದ್ರತಾ ಪಡೆಯ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದು, ಉಗ್ರರ ವಿರುದ್ಧ ತೀವ್ರ ಕಾರ್ಯಾಚರಣೆ ಆರಂಭವಾಗಿದೆ. ಈ ದಾಳಿಯ ಪರಿಣಾಮ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಉಗ್ರರ ವಿರುದ್ದ ಕಾರ್ಯಾಚರಣೆ ಮುಂದುವರಿದಿದೆ.
ಪುಲ್ವಾಮ ದಾಳಿಗೆ ಪ್ರತಿಕಾರವಾಗಿ ಭಾರತವು ಬಾಲಾಕೋಟ್ ಜೈಷ್ ಎ ಮೊಹಮದ್ ಉಗ್ರ ಶಿಬಿರದ ಮೇಲೆ ದಾಳಿ ನಡೆಸಿತ್ತು. ಆ ನಂತರದಲ್ಲಿ ಪಾಕ್ ಸೇನೆ ಕದನ ವಿರಾಮ ಉಲ್ಲಂಘನೆ ತಾರಕ್ಕೇರಿದೆ. ಜನವರಿಯಿಂದ ಈ ವರೆಗೆ ಗಡಿ ನಿಯಂತ್ರಣ ರೇಖೆಯಲ್ಲಿ 110 ಬಾರಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ.