ಶಿವಮೊಗ್ಗ, ಮಾ. 27 (DaijiworldNews/SM): ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕಾರಿಪುರ ಪೊಲೀಸರು 10 ಆರೋಪಿಗಳನ್ನು ಬಂಧಿಸಿದ್ದಾರೆ. ಈ ನಡುವೆ ಕರ್ತವ್ಯ ಲೋಪದ ಆರೋಪ ವ್ಯಕ್ತವಾಗಿದೆ.
ಉಳಿದ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಶೋಧಕಾರ್ಯ ನಡೆಸಿದ್ದಾರೆ. ಅಲ್ಲದೇ ಧರಣಿ ವೇಳೆ ಗಲಾಟೆ ಆಗುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಇತ್ತು. ಈ ವಿಷಯ ಶಿಕಾರಿಪುರ ಪೊಲೀಸರಿಗೆ ತಿಳಿದಿದ್ದರೂ, ಪ್ರತಿಭಟನೆಯನ್ನು ಹಗುರವಾಗಿ ಪರಿಗಣಿಸಿದ್ದು, ಮತ್ತು ನಿರ್ಲಕ್ಷ್ಯದಿಂದ ಕಲ್ಲುತೂರಾಟ ನಡೆದಿದೆ ಎಂದು ಹೇಳಲಾಗುತ್ತಿದೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ಮುನ್ನಡೆಸಲಾಗಿದೆ.