ಗುಜರಾತ್, ಮಾ 28 (DaijiworldNews/MS): ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಂಡ ವಿಚಾರ ಚರ್ಚೆಯಲ್ಲಿರುವಾಗಲೇ 2017ರಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಹರಿದು ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಅನಂತ್ ಪಟೇಲ್ಗೆ ಗುಜರಾತ್ನ ನವಸಾರಿಯ ನ್ಯಾಯಾಲಯವು ದಂಡ ವಿಧಿಸಿದೆ.
ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಅನಂತ್ ಪಟೇಲ್ ಮತ್ತು ಇತರರು ನವಸಾರಿ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಕಚೇರಿಗೆ ನುಗ್ಗಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಹರಿದು ಹಾಕಿದ್ದರು. ಕ್ರಿಮಿನಲ್ ಅತಿಕ್ರಮಣಕ್ಕಾಗಿ ಮೂವರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿದ ನ್ಯಾಯಾಲಯವು 99 ರೂ. ದಂಡ ಪಾವತಿಸಲು ವಿಫಲವಾದರೆ ಏಳು ದಿನಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಹೇಳಿದೆ.
ಹೆಚ್ಚುವರಿ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ವಿಎ ಧಾಧಲ್ ಅವರ ನ್ಯಾಯಾಲಯವು ಭಾರತೀಯ ದಂಡ ಸಂಹಿತೆಯ 447 ರ ಅಡಿಯಲ್ಲಿ ವಂಸ್ಡಾ (ಪರಿಶಿಷ್ಟ ಜಾತಿ) ಸ್ಥಾನದ ಶಾಸಕ ಅನಂತ್ ಪಟೇಲ್ ಅವರನ್ನು ತಪ್ಪಿತಸ್ಥರೆಂದು ಘೋಷಿಸಿತು ಮತ್ತು ಅವರಿಗೆ ದಂಡವನ್ನು ವಿಧಿಸಿದೆ.