ನವದೆಹಲಿ, ಮಾ 31 (DaijiworldNews/DB): ಮೋದಿ ಹಟಾವೋ, ದೇಶ್ ಬಚಾವೋ ಎಂಬುದಾಗಿ ಅಹ್ಮದಾಬಾದ್ನ ವಿವಿಧೆಡೆ ಪೋಸ್ಟರ್ ಹಾಕಿದ ವಿಚಾರವಾಗಿ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ದ ಆಮ್ ಆದ್ಮಿ ಪಕ್ಷವು ರಾಷ್ಟ್ರವ್ಯಾಪಿ ಅಭಿಯಾನ ಆರಂಭಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದ್ದು, ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ.
ಸದ್ಯ ಎಂಟು ಮಂದಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಹ್ಮದಾಬಾದ್ ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.