ನವದೆಹಲಿ, ಮಾ 31 (DaijiworldNews/HR): ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟದಂತಹ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದರೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ದಕ್ಷಿಣ ಮಧ್ಯ ರೈಲ್ವೆ (ಎಸ್ಸಿಆರ್) ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.
ತೆಲಂಗಾಣದ ವಿವಿಧ ಸ್ಥಳಗಳಿಂದ ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟದ ಹಲವಾರು ನಿದರ್ಶನಗಳು ವರದಿಯಾದ ನಂತರ ಈ ಎಚ್ಚರಿಕೆ ನೀಡಲಾಗಿದೆ.
ಇನ್ನು ಫೆಬ್ರವರಿ 2019 ರಲ್ಲಿ ಪ್ರಾರಂಭವಾದಾಗಿನಿಂದ ವಂದೇ ಭಾರತ್ ಎಕ್ಸ್ಪ್ರೆಸ್ ಮೇಲೆ ತೆಲಂಗಾಣ, ಬಿಹಾರ, ಉತ್ತರ ಪ್ರದೇಶ, ಛತ್ತೀಸ್ಗಢ ಮತ್ತು ಪಶ್ಚಿಮ ಬಂಗಾಳದಲ್ಲಿ ದಾಳಿ ಮಾಡಲಾಗಿದೆ.
ರೈಲುಗಳ ಮೇಲೆ ಕಲ್ಲು ತೂರಾಟವು ಕ್ರಿಮಿನಲ್ ಅಪರಾಧವಾಗಿದ್ದು, ಅಪರಾಧಿಗಳ ವಿರುದ್ಧ ರೈಲ್ವೆ ಕಾಯ್ದೆಯ ಸೆಕ್ಷನ್ 153 ರ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು, ಇದು 5 ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಗೆ ಗುರಿಯಾಗುತ್ತದೆ ಹೇಳಲಾಗಿದೆ.