ನವದೆಹಲಿ, ಏ 02 (DaijiworldNews/HR): 2019ರ ಮೋದಿ ಉಪನಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ಕೋರ್ಟ್ 2 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿ, ತೀರ್ಪು ನೀಡಿದ್ದು, ಸೆಷನ್ಸ್ ಕೋರ್ಟ್ನಲ್ಲಿಈ ಆದೇಶವನ್ನು ಪ್ರಶ್ನಿಸಲು ಮುಂದಾಗಿದ್ದಾರೆಂದು ಮೂಲಗಳು ತಿಳಿಸಿವೆ.
2 ವರ್ಷ ಜೈಲು ಶಿಕ್ಷೆಗೆ ಗುರಿಯಾದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಲೋಕಸಭೆ ಸದಸ್ಯತ್ವ ಕೂಡ ರದ್ದಾಗಿದ್ದು, ಕೇರಳದ ವಯನಾಡ ಕ್ಷೇತ್ರವನ್ನು ಲೋಕಸಭೆಯಲ್ಲಿ ಪ್ರತಿನಿಧಿಸುತ್ತಿದ್ದರು.
ಇನ್ನು ಮಾನಹಾನಿ ಪ್ರಕರಣದಲ್ಲಿ ತಮ್ಮ ವಿರುದ್ಧ ನೀಡಲಾಗಿರುವ ಜೈಲುಶಿಕ್ಷೆಯನ್ನು ರದ್ದು ಮಾಡುವಂತೆ ಕೋರಿ ರಾಹುಲ್ ಗಾಂಧಿ ಅವರು ಮನವಿ ಸಲ್ಲಿಸಲಿದ್ದು, ಪ್ರಕರಣದ ವಿಚಾರಣೆ ಮುಗಿಯುವರೆಗೂ ಶಿಕ್ಷೆಗೆ ಮಧ್ಯಂತರ ತಡೆಯನ್ನು ನೀಡುವಂತೆ ಮನವಿ ಮಾಡಿಕೊಳ್ಳಲಿದ್ದಾರೆಂದು ತಿಳಿದು ಬಂದಿದೆ.
2019ರಲ್ಲಿ ಕರ್ನಾಟಕದ ಕೋಲಾರ್ನ ಸಾರ್ವಜನಿಕ ರ್ಯಾಲಿಯೊಂದರಲ್ಲಿ ಎಲ್ಲ ಕಳ್ಳರ ಉಪನಾಮ ಮೋದಿ ಎಂದೇ ಏಕೆ ಇರುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವುದಕ್ಕಾಗಿ ನೀರವ್ ಮೋದಿ ಮತ್ತು ಲಲಿತ್ ಮೋದಿ ಅವರನ್ನು ಉದ್ದೇಶಿಸಿ ಹೇಳಿದ್ದರು.
ಇನ್ನು ಬಿಜೆಪಿ ನಾಯಕ, ಬಿಹಾರ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ರಾಹುಲ್ ಗಾಂಧಿ ವಿರುದ್ಧ ಬಿಹಾರ ಕೋರ್ಟ್ನಲ್ಲಿ ಮತ್ತೊಂದು ಮಾನನಷ್ಟ ಮೊಕದ್ದಮೆ ಹೂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಏಪ್ರಿಲ್ 12ರಂದು ಹಾಜರಾಗಿ ಹೇಳಿಕೆ ದಾಖಲಿಸುವಂತೆ ಬಿಹಾರ ಕೋರ್ಟ್ ರಾಹುಲ್ ಗಾಂಧಿಗೆ ಸಮನ್ಸ್ ನೀಡಿದೆ.