ಬೆಂಗಳೂರು,ಏ 04 (DaijiworldNews/MS): ಚುನಾವಣೆ ಕಾವು ಜೋರಾಗುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಈಗ ಸಂಕಷ್ಟ ಎದುರಾಗಿದೆ. ರೋಡ್ ಶೋ ವೇಳೆ ಕಲಾವಿದರತ್ತ ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಾ.28ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ರೋಡ್ ಶೋ ವೇಳೆ ವೇಳೆ 500 ರೂಪಾಯಿಯ ನೋಟುಗಳನ್ನ ಕಲಾವಿದರ ಮೇಲೆ ಎಸೆದಿದ್ದ ಆರೋಪ ಕೇಳಿಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅಲ್ಲದೆ, ಭಾರಿ ಆಕ್ರೋಶಕ್ಕೂ ಕಾರಣವಾಗಿತ್ತು.
ನೋಟುಗಳನ್ನು ಎಸೆದಿದ್ದಾರೆ ಈ ಸಂಬಂಧ ಡಿಕೆ ಶಿವಕುಮಾರ್ ವಿರುದ್ಧ ಆರ್ಸಿ ಆಕ್ಟ್ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಪಿ. ಅಶೋಕ್ ಎಂಬ ವ್ಯಕ್ತಿ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇದಲ್ಲದೆ ಜೆಎಂಎಫ್ ಸಿ ಕೋರ್ಟ್ನಲ್ಲಿ ಚುನಾವಣಾಧಿಕಾರಿಗಳು ದೂರು ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸುವಂತೆ ಕೋರ್ಟ್ ಸೂಚಿಸಿದ ಹಿನ್ನೆಲೆ ಇದೀಗ ಮಂಡ್ಯದ ಗ್ರಾಮಾಂತರ ಠಾಣೆಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.