ತೀರ್ಥಹಳ್ಳಿ, ಏ 04 (DaijiworldNews/HR): ವಿಶ್ವಕರ್ಮ ಸಮುದಾಯ ಮುಖಂಡರು ಕುರುವಳ್ಳಿ ಸಮೀಪದಲ್ಲಿ ಇರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಕರೆಸಿ ಸಭೆಯನ್ನು ಹಮ್ಮಿಕೊಂಡಿದ್ದು, ಈ ಸಭೆಯಲ್ಲಿ ನೂರಕ್ಕೂ ಹೆಚ್ಚು ಜನ ಭಾಗವಹಿಸಿದ್ದರು.
ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಇರುವುದರಿಂದ ಚುನಾವಣೆಯ ನಿಯಮಾವಳಿಯ ಅನುಸಾರ ಈ ಕಾರ್ಯಕ್ರಮಕ್ಕೆ ಚುನಾವಣಾ ಅಧಿಕಾರಿಗಳಿಂದ ಅನುಮತಿ ಪಡೆಯಬೇಕಾಗಿತ್ತು.
ಇನ್ನುಈ ಸಭೆಗೆ ಚುನಾವಣಾ ಅಧಿಕಾರಿಗಳಿಂದ ಯಾವುದೇ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಚುನಾವಣಾ ಅಧಿಕಾರಿಗಳು ದಿಡಿರ್ ದಾಳಿ ನೆಡೆಸಿ ಕಾರ್ಯಕ್ರಮವನ್ನು ನಿಲ್ಲಿಸಿದ್ದಾರೆ.