ನವದೆಹಲಿ, ಏ 07 (DaijiworldNews/MS): ದೇಶದಲ್ಲಿ ಹೆಚ್ಚಾಗುತ್ತಿರುವ ಕೋವಿಡ್ ಪ್ರಕರಣಗಳ ಗಮನದಲ್ಲಿ ಇರಿಸಿ ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ಇಂದು ರಾಜ್ಯ ಆರೋಗ್ಯ ಸಚಿವರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳೊಂದಿಗೆ ಮಹತ್ವದ ನಡೆಸಿದ್ದಾರೆ.
ಸಭೆಯ ನಂತರ ಸಚಿವರು, ದೇಶದ ಜನತೆಗೆ ಆರೋಗ್ಯದ ಕುರಿತು ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ. ಕೊರೊನಾ ನಿರ್ವಹಣೆಗಾಗಿ ರಾಜ್ಯಗಳು ಜಾಗರೂಕರಾಗಿರಲು ಮತ್ತು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವರು ಸಲಹೆ ನೀಡಿದ್ದಾರೆ.
ಏ.10ಮತ್ತು 11 ರಂದು ಎಲ್ಲಾ ಆಸ್ಪತ್ರೆಗಳಲ್ಲಿ ಮೂಲಸೌಕರ್ಯದ ಕುರಿತು ಅಣಕು ಡ್ರಿಲ್ ಮಾಡಬೇಕು. ಏಪ್ರಿಲ್ 8 ಮತ್ತು 9 ರಂದು ಜಿಲ್ಲಾಡಳಿತಗಳು ಆರೋಗ್ಯ ಅಧಿಕಾರಿಗಳೊಂದಿಗೆ ಸನ್ನದ್ದತೆಯನ್ನು ಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.