ದಾವಣಗೆರೆ, ಮೇ 14 (DaijiworldNews/HR): ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಪರಾಜಿತ ಅಭ್ಯರ್ಥಿ ಎಂ.ಪಿ ರೇಣುಕಾಚಾರ್ಯ ಅವರು ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಎಂದು ಘೋಷಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಕೆಲಸ, ಕೊರೊನಾ ಸಮಯದಲ್ಲಿ ಜೀವ ಹಂಗು ತೊರೆದರೂ ಜನರು ಸೋಲಿಸಿದರು. ರಾಜಕೀಯದಿಂದ ನಿವೃತ್ತಿ ಪಡೆದು, ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇನೆ ಎಂದರು.
ಇನ್ನು ಒಂದು ಸುತ್ತಿನಲ್ಲೂ ಮುನ್ನಡೆ ಸಾಧಿಸದೆ ಇರುವುದಕ್ಕೆ ರೇಣುಕಾಚಾರ್ಯ ಬೇಸರ ವ್ಯಕ್ತಪಡಿಸಿದ್ದು, ನಾನು ಕ್ಷೇತ್ರದ ಜನರಿಗೆ ಹಗಲಿರುಳು ಕೆಲಸ ಮಾಡಿದರೂ ಸೋತಿರುವುದಕ್ಕೆ ಕಣ್ಣೀರು ಹಾಕಿದ್ದಾರೆ.