ಮುಂಬೈ,ಮೇ17(DaijiworldNews/KH):ಹಿರಿಯ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಮತ್ತು ನಟಿ ಅನುಷ್ಕಾ ಶರ್ಮಾ ಅವರು ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಾಗಿ ಸಂಚರಿಸುತ್ತಿದ್ದಾಗ ಹೆಲ್ಮೆಟ್ ಧರಿಸದ್ದಕ್ಕಾಗಿ ದ್ವಿಚಕ್ರ ವಾಹನ ಸವಾರರ ವಿರುದ್ದ ದಂಡ ವಿಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಮುಂಬೈ ರಸ್ತೆಯಲ್ಲಿ ಹೆಲ್ಮೆಟ್ ಇಲ್ಲದೆ ಬೈಕ್ ಸವಾರಿ ಮಾಡಿದ ಅಮಿತಾಬ್ ಮತ್ತು ಅನುಷ್ಕಾ ಡ್ರಾಪ್ ನೀಡಿದಕ್ಕೆ ವಾಹನ ಸವಾರರಿಗೆ ಧಂಡ ವಿಧಿಸಿದ್ದಾರೆ ". ಎರಡು ಪ್ರತ್ಯೇಕ ಘಟನೆಗಳಲ್ಲಿ ಸವಾರರು ಹೆಲ್ಮೆಟ್ ಕಡ್ಡಾಯ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಗಮನಸೆಳೆದ ನಂತರ ದಂಡ ವಿಧಿಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ಮುಂಬೈ ಟ್ರಾಫಿಕ್ ಪೊಲೀಸರು ಮಂಗಳವಾರ ಎರಡೂ ವಾಹನಗಳ ಸವಾರರ ವಿರುದ್ಧ ಹೊರಡಿಸಲಾದ ಚಲನ್ಗಳ ಪ್ರತಿಗಳನ್ನು ತಮ್ಮ ಟ್ವಿಟರ್ ಹ್ಯಾಂಡಲ್ನಲ್ಲಿ ಅಪ್ಲೋಡ್ ಮಾಡಿದ್ದಾರೆ.
ನಟಿ ಅನುಷ್ಕಾ ಶರ್ಮಾ ಇತ್ತೀಚೆಗೆ ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡುತ್ತಿದ್ದು, ಇಬ್ಬರೂ ಹೆಲ್ಮೆಟ್ ಇಲ್ಲದೆ ಸವಾರಿ ಮಾಡುತ್ತಿದ್ದರು. ಇದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರ ಟ್ವಿಟರ್ ಹ್ಯಾಂಡಲ್ನಲ್ಲಿ ಕ್ಲಿಪ್ಗಳನ್ನು ಟ್ಯಾಗ್ ಮಾಡುವ ಮೂಲಕ ಮುಂಬೈ ಪೊಲೀಸರ ಗಮನಕ್ಕೆ ತಂದಿದ್ದಾರೆ. ಇದನ್ನು ಗಮನಿಸಿದ ಪೊಲೀಸರು ವಾಹನ ಸವಾರನ ವಿರುದ್ಧ 10,500 ರೂ ದಂಡದ ಜೊತೆಗೆ ನೋಟೀಸ್ ಜಾರಿಗೊಳಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಅಮಿತಾಬ್ ಬಚ್ಚನ್ ಕೂಡ ಕೆಲವು ದಿನಗಳ ಹಿಂದೆ ನಗರದ ಟ್ರಾಫಿಕ್ ಹಿನ್ನೆಲೆ ದ್ವಿಚಕ್ರ ವಾಹನದಲ್ಲಿ ತೆರಳಿದ್ದಾರೆ. ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸವಾರಿಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ ಮತ್ತು ಸವಾರರು ಹೆಲ್ಮೆಟ್ ಇಲ್ಲದೆ ಕಾಣಿಸಿಕೊಂಡಿದ್ದಾರೆ. ಸವಾರ ಮತ್ತು ನಟ ಹೆಲ್ಮೆಟ್ ಧರಿಸಿರಲಿಲ್ಲ ಎಂದು ಕೆಲವು ನೆಟ್ಟಿಗರು ಗಮನಸೆಳೆದಿದ್ದಾರೆ, ನಂತರ ಮುಂಬೈ ಪೊಲೀಸರು ಈ ಮಾಹಿತಿಯನ್ನು ಸಂಚಾರ ಪೊಲೀಸರೊಂದಿಗೆ ಹಂಚಿಕೊಂಡಿದ್ದಾರೆ.