ನವದೆಹಲಿ, ಮೇ 18 (DaijiworldNews/HR): ಪಕ್ಷದ ಹಿತದೃಷ್ಟಿಯಿಂದ ಉಪಮುಖ್ಯಮಂತ್ರಿ ಸ್ಥಾನವನ್ನು ಒಪ್ಪಿಕೊಂಡಿದ್ದೇನೆ ಎಂದು ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕರ್ನಾಟಕದ ಬಗ್ಗೆ ನಮಗೆ ಬದ್ಧತೆಯಿದ್ದು, ಸಂಸತ್ ಚುನಾವಣೆಯಿದೆ. ಹೀಗಾಗಿ ಪಕ್ಷದ ಹಿತಾಸಕ್ತಿಯಿಂದ ಈ ಸೂತ್ರಕ್ಕೆ ಒಪ್ಪಿಗೆ ಸೂಚಿಸಿದ್ದೇನೆ ಎಂದರು.
ಇನ್ನು ಕರ್ನಾಟಕಕ್ಕೆ ಸೇವೆ ಸಲ್ಲಿಸುವ ಜವಾಬ್ದಾರಿ ನನ್ನ ಮೇಲಿದ್ದು, ನಾವು ಅದನ್ನು ಮಾಡಬೇಕಿದೆ ಎಂದಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತಿಯಾಗಿ ಆಯ್ಕೆಯಾಗಿದ್ದು, ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದು, ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವು ಮೇ.20ರಂದು ನಡೆಯಲಿದೆ.