ನವದೆಹಲಿ,ಮೇ 18 (DaijiworldNews/MS): ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ , ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ . ಈ ವಿಚಾರವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಈ ಬಗ್ಗೆ ನವದೆಹಲಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಮೇ 20ರಂದು ಸಿದ್ದರಾಮಯ್ಯ, ಡಿಕೆಶಿ ಪ್ರಮಾಣವಚನ ಸ್ವೀಕರಿಸುತ್ತಾರೆ.ಮಧ್ಯಾಹ್ನ ಪದಗ್ರಹಣ ಸಮಾರಂಭ ನಡೆಯಲಿದೆ ಎಂದರು.
ಕರ್ನಾಟಕದ ಗೆಲುವಿನ ಶ್ರೇಯಸ್ಸು ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಸೇರಿ ಎಲ್ಲ ಹಿರಿಯ ನಾಯಕರಿಗೂ ಸಲ್ಲುತ್ತದೆ. ಭಾರತ್ ಜೋಡೋ ಪಾದಯಾತ್ರೆ ಬಳಿಕ ಕಾಂಗ್ರೆಸ್ ಗೆದ್ದಿದೆ. ಕರ್ನಾಟಕದಲ್ಲಿ ಅನುಭವಿ, ಸಮರ್ಥ ಕಾಂಗ್ರೆಸ್ ನಾಯಕರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷವನ್ನು ಸಂಘಟಿಸಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇಬ್ಬರೂ ಸಮರ್ಥ ನಾಯಕರು ಎಂದರು.
ರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ ಸುರ್ಜೇವಾಲ ಮಾತನಾಡಿ ಇದು ಕಾಂಗ್ರೆಸ್ ನ ಗೆಲುವಲ್ಲ, ಪ್ರತಿಯೊಬ್ಬ ಕನ್ನಡಿಗರ ಗೆಲುವಾಗಿದೆ, ಪ್ರಜಾತಂತ್ರ, ಬಡವರ, ಮದ್ಯಮ ವರ್ಗದ ಹಾಗೂ ಪ್ರತಿಯೊಬ್ಬರ ಗೆಲುವಾಗಿದೆ. ಪ್ರಜಾತಂತ್ರ ನೀತಿಯನ್ನು ಬುಲ್ಡೋಜರ್ ಹೆಸರಿನಲ್ಲಿ ತುಳಿಯುವವರ ವಿರುದ್ದದ ಜಯ ಎಂದು ಹೇಳಿದರು.