ಪಾಟ್ನಾ, ಮೇ 19 (DaijiworldNews/HR): ಬಿಹಾರದ ಸರ್ಕಾರಿ ಶಾಲೆಯೊಂದರಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ 36 ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಗುರುವಾರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಮಧ್ಯಾಹ್ನದ ಊಟ ಮಾಡುವ ವೇಳೆ ಈ ಘಟನೆ ನಡೆದಿದ್ದು, ವಿದ್ಯಾರ್ಥಿಯೊಬ್ಬ ತನ್ನ ತಟ್ಟೆಯಲ್ಲಿ ಹಲ್ಲಿ ಇರುವುದನ್ನು ಕಂಡು ತಕ್ಷಣ ಶಿಕ್ಷಕರಿಗೆ ಮಾಹಿತಿ ನೀಡಿದ್ದು ಬಳಿಕ ಶಾಲೆಯು ಮಧ್ಯಾಹ್ನದ ಊಟವನ್ನು ಸ್ಥಗಿತಗೊಳಿಸಿತು.
ಇನ್ನು ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿದ ವಿದ್ಯಾರ್ಥಿಗಳನ್ನು ತಕ್ಷಣವೇ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, 36 ವಿದ್ಯಾರ್ಥಿಗಳು ಈಗ ಅಪಾಯದಿಂದ ಪಾರಾಗಿದ್ದಾರೆ ಎಂದು ಸದರ್ ಆಸ್ಪತ್ರೆಯ ವೈದ್ಯ ಡಾ.ಸಂತೋಷ್ ತಿಳಿಸಿದ್ದಾರೆ.
40 ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಸೇವಿಸಿದ್ದಾರೆ, ಅದರಲ್ಲಿ 36 ಮಂದಿ ಅಸ್ವಸ್ಥರಾಗಿದ್ದಾರೆ.