ಬೆಂಗಳೂರು, ಮೇ 19 (DaijiworldNews/MS): ನಿಯೋಜಿತ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನವದೆಹಲಿ ತಲುಪಿದ್ದಾರೆ. ಸಚಿವ ಸಂಪುಟ ರಚನೆ, ತಮ್ಮ ಸಂಪುಟಕ್ಕೆ ಸೇರ್ಪಡೆ ಮಾಡುವ ಸದಸ್ಯರ ಹೆಸರುಗಳ ಪಟ್ಟಿಯನ್ನು ಹಿಡಿದುಕೊಂಡು ಹೈಕಮಾಂಡ್ ಜೊತೆ ಚರ್ಚಿಸಲು ಉಭಯ ನಾಯಕರೂ ಖಾಸಗಿ ಹೊಟೇಲ್ ಗೆ ತಲುಪಿದ್ದಾರೆ.
ಸಂಭಾವ್ಯ ಸಚಿವರ ಪಟ್ಟಿಯನ್ನು ಹಿಡಿದು ತೆರಳಿರುವ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ ಇತರೆ ವರಿಷ್ಟರಿಂದ ಅನುಮೋದನೆ ಪಡೆಯಲಿದ್ದಾರೆ. ನಾಯಕರು ಇಂದು ಸಂಜೆಯೇ ಮತ್ತೆ ಬೆಂಗಳೂರಿಗೆ ವಾಪಾಸ್ ಆಗುವ ಸಾಧ್ಯತೆ ಇದೆ.
ನಾಳೆ ಮುಖ್ಯಮಂತ್ರಿಗಳ ಜೊತೆಗೆ 25 ರಿಂದ 28 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರು ಲಾಬಿ ನಡೆಸುತ್ತಿದ್ದಾರೆ. ಅವರ ಪರವಾಗಿ ಸಮುದಾಯದ ಮುಖಂಡರು, ಮಠಾಧೀಶರು ಕೂಡ ಬೇಡಿಕೆಯಿಡುತ್ತಿದ್ದಾರೆ.