ಬೆಂಗಳೂರು, ಮೇ 20 (DaijiworldNews/MS): ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿಯನ್ನು ಭೋದಿಸಿದರು. ಇದೇ ವೇಳೆ ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.
ಡಿಕೆ ಶಿವಕುಮಾರ್ ಅವರು ಶ್ರೀ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು
ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ತಮಿಳುನಾಡು ಸಿಎಂ ಮುಂತಾದವರು ಹಾಜರಿದ್ದರು.