ಬೆಂಗಳೂರು, ಮೇ 20 (DaijiworldNews/MS): ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದರು.
ಅದಲ್ಲದೇ ಇಂದು ಎಂಟು ಜನರು ಸಚಿವರೂ ಪ್ರಮಾಣವಚನ ಸ್ವೀಕರಿಸಿದ್ದಾರೆ. ಡಾ. ಜಿ. ಪರಮೇಶ್ವರ್, ಎಂ. ಬಿ. ಪಾಟೀಲ್, ಪ್ರಿಯಾಂಕ ಖರ್ಗೆ, ಕೆ.ಎಚ್. ಮುನಿಯಪ್ಪ, ಕೆ.ಎಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ಖಾನ್, ರಾಮಲಿಂಗಾ ರೆಡ್ಡಿಈ ಎಂಟು ಜನ ಶಾಸಕರು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧನೆ ಮಾಡಿದರು.
ಜಮೀರ್ ಅಹ್ಮದ್ ಇಂಗ್ಲೀಷ್ ಭಾಷೆಯಲ್ಲಿ ಅಲ್ಲಾಹ್ ಮತ್ತು ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸತೀಶ್ ಜಾರಕಿಹೊಳಿ ಅವರು ಬುದ್ಧ, ಬಸವ, ಅಂಬೇಡ್ಕರ್ ಹೆಸರಿನಲ್ಲಿ, ಡಾ.ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ ಹಾಗೂ ಉಳಿದ ಸಚಿವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.