ಬೆಂಗಳೂರು, ಮೇ 20 (DaijiworldNews/MS): ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭದಲ್ಲಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ಘೋಷಿಸಿದ್ದಾರೆ.
ಕರ್ನಾಟಕದ ಜನರ ಆಶೀರ್ವಾದಿಂದ ನಮ್ಮ ಸರ್ಕಾರ ಬಂದಿದೆ. ರಾಹುಲ್, ಖರ್ಗೆ, ಪ್ರಿಯಾಂಕಾ ಸೇರಿ ಅನೇಕರು ಪ್ರಚಾರ ಮಾಡಿದ್ದರು. ಸಾಹಿತಿಗಳು, ಚಿಂತಕರು, ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ.
ಹಿಂದೆಯೂ ನುಡಿದಂತೆ ನಡೆದಿದ್ದೇವೆ. ಮುಂದೆಯೂ ಸಹ ಹಾಗೆಯೇ ನಡೆಯುತ್ತೇವೆ ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ. ಕರ್ನಾಟಕದ ಜನರಿಗೆ ನಾವು ನೀಡಿದ ಭರವಸೆ ಈಡೇರಿಸುತ್ತೇವೆ. ಜನರಿಗೆ ಕೊಟ್ಟಿರುವ ಐದು ಗ್ಯಾರಂಟಿಗಳನ್ನು ಇಂದೇ ಕ್ಯಾಬಿನೆಟ್ ಮೀಟಿಂಗ್ನಲ್ಲಿ ಒಪ್ಪಿಗೆ ಪಡೆದು, ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.